ಚಿತ್ರದುರ್ಗ ನಗರದಲ್ಲಿ ಪ್ರತಿ ವರ್ಷ ನಡೆಯುವ ಬೃಹತ್ ಶೋಭಯಾತ್ರೆಯು ಇಡೀ ಏಷ್ಯಾ ಖಂಡದಲ್ಲಿಯೇ ಅತೀ ದೊಡ್ಡ ಸಂಖ್ಯೆಯಲ್ಲಿ ಜನ ಸೇರುವ ಮುಂಬೈ ನಂತರದ ಎರಡನೇ ಅತೀ ದೊಡ್ಡ ಶೋಭಾಯಾತ್ರೆಯಾಗಿದೆ.ಇದೇ ಸೆ.13ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಮತ್ತು ಶೋಭಾಯಾತ್ರೆಯ ಹಿನ್ನೆಲೆಯಲ್ಲಿ ಇಡೀ ಚಿತ್ರದುರ್ಗ ನಗರ ಸಂಪೂರ್ಣವಾಗಿ ಕೇಸರಿಮಯವಾಗಿದ್ದು ಶೋಭಾಯಾತ್ರೆಗೆ ಕೋಟೆ ನಾಡು ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಈ ವರ್ಷದ ವಿಸರ್ಜನಾ ಕಾರ್ಯಕ್ರಮಕ್ಕೆ ಡಿಜೆಯನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿದ್ದು,ಶೋಭಾಯಾತ್ರೆಗೆ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದ್ದು, 3869 ಪೊಲೀಸ್ ಅಧಿಕಾರಿ.