ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಸಂಭಂದ ಬಲಗೈ ಹಾಗು ಎಡಗೈ ಸಮುದಾಯಗಳಿಗೆ ಶೇ.6 ರಷ್ಟು ಹಾಗೂ ಭೋವಿ,ಲಮಾಣಿ, ಕೊರಮ,ಕೊರಚ,ಸೇರಿದಂತೆ ಇತರ ಸೂಕ್ಷ್ಮ ಅಲೆಮಾರಿ ಸಮುದಾಯಗಳಿಗೆ ಶೇ.5 ರಷ್ಟು ಮೀಸಲಾತಿ ವರ್ಗೀಕರಣಕ್ಕೆ ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿದ್ದು ಸ್ವಾಗತಾರ್ಹ 35 ವರ್ಷಗಳ ಒಳ ಮೀಸಲಾತಿ ಸಂಭಂಧದ ಸುದೀರ್ಘ ಹೋರಾಟಕ್ಕೆ ಸಂದ ಜಯವಾಗಿದ್ದು ಬಹಳಷ್ಟು ಸಂತೋಷ ತಂದಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇಡೀ ಸಚಿವ ಸಂಪುಟಕ್ಕೆ ಅಭಿನಂದನೆ ತಿಳಿಸುತ್ತೇನೆಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ಸಮುದಾಯದ ಮುಖಂಡರಾದ ಪಟ್ರೇನಹಳ್ಳಿ ಕೃಷ್ಣ ತಿಳಿಸಿದರು.