2025-26ನೇ ಸಾಲಿನ ಭರಮಸಾಗರ ಹೋಬಳಿ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟವನ್ನು ಶುಕ್ರವಾರ ಬೆಳಿಗ್ಗೆ 10:30ಕ್ಕೆ ಚಿತ್ರದುರ್ಗ ತಾಲೂಕಿನ ಕೆಆರ್ ಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿತ್ತು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಿತ್ರದುರ್ಗ ಇವರಿಂದ ಆಯೋಜಿಸಲಾಗಿತ್ತು. ಕ್ರೀಡಾಕೂಟ ಉದ್ಘಾಟಿಸಿದ ಜಿಲ್ಲಾ ಉಪ ವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಶಿ ಮಾತನಾಡಿ, ವಿದ್ಯಾರ್ಥಿಗಳಿಗೆ ಕ್ರೀಡಾಕೂಟಗಳು ದೈಹಿಕ ಮತ್ತು ಮಾನಸಿಕ ಯೋಗಕ್ಷೇಮ, ಶಿಸ್ತು, ತಂಡದ ಕೆಲಸ ಮತ್ತು ನಾಯಕತ್ವದಂತಹ ಜೀವನ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತವೆ ಎಂದರು.