ಬಹಳ ದಿನಗಳಿಂದ ಬಗೆಹರಿಯದೆ ನ್ಯಾಯಾಲಯದಲ್ಲಿ ಬಾಕಿ ಉಳಿದಿದ್ದ ಪ್ರಕರಣಗಳನ್ನು ಇತ್ಯರ್ಥ ಮಾಡುವ ಸಲುವಾಗಿ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾಯಮೂರ್ತಿ ಹನುಮಂತಪ್ಪ ಅವರು ತಿಳಿಸಿದರು.