ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಮಸೂತಿ ಗ್ರಾಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇವಾ ಪಾಕ್ಷಿಕ ಕಾರ್ಯಕ್ರಮದ ಪ್ರಯುಕ್ತ ಹಮ್ಮಿಕೊಂಡಿದ್ದ ಹಗ್ಗ ಜಗ್ಗುವ ಸ್ಪರ್ಧೆ ಗೆ ಮಾಜಿ ಸಚಿವ ಎಸ್ ಕೆ ಬೆಳ್ಳುಬ್ಬಿ ಬುಧವಾರ ಸಾಯಂಕಾಲ 5ಗಂಟೆ ಸುಮಾರಿಗೆ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ನರೇಂದ್ರ ಮೋದಿ ದೇಶದ ಪ್ರಧಾನ ಮಂತ್ರಿಯಾಗಿ 11ವರ್ಷಗಳ ಕಾಲ ಆಡಳಿತ ನಡೆಸಿ ದೇಶಕ್ಕೆ ಭದ್ರಬುನಾದಿ ಹಾಕಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಭಿಮಾನಿಗಳು ಹಾಗೂ ಬಿಜೆಪಿ ಉಪಸ್ಥಿತರಿದ್ದರು.