ಈಗಾಗಲೇ ಸಲ್ಲಿಕೆಯಾಗಿರುವ ಬಿಪಿಎಲ್ ಕಾರ್ಡ್‌ಗಳ ಅರ್ಜಿಗಳನ್ನು ಪರಿಷ್ಕರಣೆ ಮಾಡಿಸಿ ಕೂಡಲೇ ಹೊಸ ಕಾರ್ಡ್ ವಿತರಿಸುವಂತೆ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ಅಧ್ಯಕ್ಷ ಕಲ್ಲೂರು ಮೇಘರಾಜ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು. ಶುಕ್ರವಾರ ಸಂಜೆ 6 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೊಸ ಬಿಪಿಎಲ್ ಕಾರ್ಡ್‌ಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಬೇಕೆಂದು ಆಗ್ರಹಿಸಿದರು. ಬಿಪಿಎಲ್ ಕುಟುಂಬಗಳಿಗೆ ರಾಜ್ಯದ ಎಲ್ಲಾ ಸಾರ್ವಜನಿಕ ಆಸ್ಪತ್ರೆಗಳಿಗೆ ಸಿಟಿಸ್ಕ್ಯಾನ್, ಎಂಆರ್‌ಐ ಸ್ಕ್ಯಾನ್, ಅಲ್ಟ್ರಾಸೌಂಡ್ ಹಾಗೂ ಅಂಗಾಂಗ ಕಸಿ ಸೌಲಭ್ಯಗಳನ್ನು ಉಚಿತವಾಗಿ ಒದಗಿಸುವುದಾಗಿ 2025ರ ಜನವರಿಯಲ್ಲಿ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಿ 7 ತಿಂಗಳು ಕಳೆದರೂ ಈ ವರೆಗೆ ಸರ್ಕಾರಿ ಆದೇಶ ಹೊರಡಿಸಿಲ್ಲ.