ಚಿತ್ರದುರ್ಗ ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ ಪೂರ್ವಸಿದ್ಧತಾ ಸಭೆಯನ್ನ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ನಡೆಸಲಾಯಿತು. ಈ ವೇಳೆ ಮಾತ್ನಾಡಿದ ಡಿಸಿ ಟಿ.ವೆಂಕಟೇಶ್ ಮಾತ್ನಾಡಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯಾದ್ಯಂತ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಿದ್ದು, ಇದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ವ್ಯವಸ್ಥಿತ ರೀತಿಯಲ್ಲಿ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಎಲ್ಲ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುವ ಪ್ರಕ್ರಿಯೆಯನ್ನು ಆರಂಭಿಸಿದೆ ಎಂದರು