ಗುಂಡ್ಲುಪೇಟೆ ತಾಲೂಕಿನ ಬನ್ನಿತಾಳಪುರ ಗ್ರಾಮದಲ್ಲಿ ಶ್ರೀ ವಿದ್ಯಾ ಗಣಪತಿ ಮಂಡಳಿ ವತಿಯಿಂದ 49 ನೇ ವರ್ಷದ ಗಣಪತಿ ಪ್ರತಿಷ್ಠಾಪನೆ ವಿಜೃಂಭಣೆಯಿಂದ ಮಾಡಲಾಯಿತು. ಗ್ರಾಮದ ಮಹದೇಶ್ವರ ದೇವಸ್ಥಾನ ಮುಂದೆ ಜಮಾಯಿಸಿ ಗಣಪತಿ ಹಾಗೂ ಗೌರಿಯನ್ನು ಮಂಗಳವಾದ್ಯದ ಮೂಲಕ ಮೆರವಣಿಗೆ ನಡೆಸಿ ಬಳಿಕ ರಾಮಮಂದಿರ ಬಳಿ ಪ್ರತಿಷ್ಠಾಪನೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯತಿ ಸದಸ್ಯರು, ಯಜಮಾನರು, ಮುಖಂಡರು, ಯುವಕರು ಭಾಗವಹಿಸಿದ್ದರು