ಸಿಎಂ ಸಿದ್ದರಾಮಯ್ಯಗೆ ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೇ ಈ ಕೂಡಲೇ ಬೆಳೆ ಹಾನಿ ಪರಿಹಾರ ನೀಡಲಿ. ಕೇಂದ್ರದ ಬಗ್ಗೆ ನೆಪ ಹೇಳಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಜಂಗಮನಕೊಪ್ಪ ಕ್ರಾಸ್ ನಲ್ಲಿ ಬೆಳೆ ಹಾನಿ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ನಾನು ಸಿಎಂ ಆಗಿದ್ದಾಗ ಕೇಂದ್ರದ ಅನುದಾನ ಕಾಯದೆ ಎರಡು ಪಟ್ಟು ಪರಿಹಾರ ನೀಡಿದ್ದೆ ಎಂದರು.