ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಇಂದು ಶಾಸಕ ಸ್ವರೂಪ ಪ್ರಕಾಶ್ ನೇತೃತ್ವದಲ್ಲಿ ಪೌರಕಾರ್ಮಿಕರಿಗೆ ಬಾಗಿನ ವಿತರಣೆ ಮಾಡಲಾಯಿತು.ಶಾಸಕ ಸ್ವರೂಪ ಪ್ರಕಾಶ್ ಮಹಾನಗರ ಪಾಲಿಕೆಯ ಮೇಯರ್ ಹೇಮಲತಾ ಹಾಗೂ ಮಹಾನಗರ ಪಾಲಿಕೆಯ ಎಲ್ಲಾ ಸದಸ್ಯರ ಹಾಗೂ ಅಧಿಕಾರಿ ಸಿಬ್ಬಂದಿಗಳ ಸಮ್ಮುಖದಲ್ಲಿ ಪೌರಕಾರ್ಮಿಕರಿಗೆ ಗೌರವ ಪೂರಕವಾಗಿ ಬಾಗಿನ ವಿತರಿಸಿ ಗೌರಿ ಗಣೇಶ ಹಬ್ಬದ ಶುಭಾಶಯ ಕೋರಿದರು ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸ್ವರೂಪ ಪ್ರಕಾಶ್, ಹಾಸನ ನಗರ ಸ್ವಚ್ಛತೆಯಲ್ಲಿ ಪೌರಕಾರ್ಮಿಕರು ಬಹಳ ಪ್ರಮುಖ ಪಾತ್ರ ವಹಿಸುತ್ತಾರೆ, ಅಂತವರನ್ನು ಹಬ್ಬ ಹರಿ ದಿನಗಳಲ್ಲಿ ಗುರುತಿಸಿ ಅವರಿಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಈ ಸಮಾಜಕ್ಕೆ ಪೌರಕಾರ್ಮಿಕರ ಕೊಡುಗೆ ಅಪಾರ ಎಂದರು