ಕರ್ತವ್ಯದಲ್ಲಿ ಶಿಸ್ತು ಪಾಲನೆ ಮತ್ತು ಪ್ರತಿಭೆಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಕ ವೃತ್ತಿಯಿಂದ ದೇಶದ ಅತ್ಯುನ್ನತ ಸ್ಥಾನವಾದ ರಾಷ್ಟ್ರಪತಿಯ ಹುದ್ದೆಯನ್ನು ಅಲಂಕರಿಸಲು ಸಾಧ್ಯವಾಯಿತು. ಅಂತಹವರ ಆದರ್ಶಗಳು ಮತ್ತು ವಿಚಾರಧಾರೆಗಳನ್ನು ನಾವು ಅಳವಡಿಸಿಕೊಂಡು ಪ್ರೇರಪಣೆ ಆಗುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು. ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅಪಾರವಾದದ್ದು, ಮಕ್ಕಳಿಗೆ ಪೋಷಕರ ನಂತರದ ಸ್ಥಾನದಲ್ಲಿ ಶಿಸ್ತು ಕಲಿಸುವವರು ಶಿಕ್ಷಕರೇ ಆಗಿದ್ದಾರೆ. ವಿದ್ಯಾರ್ಥಿಗಳಲ್ಲಿ, ಪೋಷಕರಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳ ಕಲಿಕಾ ವ್ಯವಸ್ಥೆಯ ಬಗ್ಗೆ ನಂಬಿಕೆ ಮೂಡಬೇಕು ಆ ನಿಟ್ಟಿನಲ್ಲಿ ಗುಣಮಟ್ಟದ ಕಲಿಕೆಯನ್ನು ಕಲಿಸಿ ವಿಶ್ವಾಸ ಗಳಿಸಬೇಕು ಆಗ ಮಾತ್ರ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ