ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಮಧ್ಯಾಹ್ನ 2ಕ್ಕೆ ಮಾಧ್ಯಮದವರಿಗೆ ಮಾತನಾಡಿದ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಗಣೇಶೋತ್ಸವದ ಸಂದರ್ಭದಲ್ಲಿ ನಿಗದಿಗಿಂತ ಹೆಚ್ಚು ಶಬ್ದ ಮಾಡುವ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಸುಪ್ರೀಂ ಕೋರ್ಟ್ ಸೂಚನೆಯಂತೆ ಡಿಜೆಗಳ ಬಳಕೆಯನ್ನು ಮಾಡುವಂತಿಲ್ಲ ಆಸ್ಪತ್ರೆ, ಶಾಲೆ, ನ್ಯಾಯಾಲಯ ಇರುವ ಪ್ರದೇಶದಲ್ಲಿ ಧ್ವನಿವರ್ಧಕ ಬಳಸಬಾರದು ಎಂದು ಜಿಲ್ಲಾಧಿಕಾರಿ ತಿಳಿಸಿದರು.