ಬೀದಿ ನಾಯಿಗಳಿಗೆ ಎಬಿಸಿ ಮಾಡಬೇಕು: ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸಂತಾನೋತ್ಪತ್ತಿ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಬೀದಿನಾಯಿಗಳಿಗೆ ಎಬಿಸಿ ಲಸಿಕೆ ಹಾಕಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸಮಗ್ರ ರೋಗಗಳ ಕಣ್ಗಾವಲು ಘಟಕ ಕೋಲಾರ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಸರ್ವೇಕ್ಷಣಾ ಸಮನ್ವಯ ಸಮಿತಿ ಸಭೆಯನ್ನು ಕುರಿತು ಮಾತನಾಡಿದ ಅವರು ಬೀದಿ ನಾಯಿಗಳು ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ ಮತ್ತು ಅದರಿಂದ ವಿವಿಧ ರೋಗಗಳು