ತುಮಕೂರು ನಗರದ ಪಾಲಿಕೆ ಆವರಣದಿಂದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದವರೆಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣನ ಮೂರ್ತಿ ಮೆರವಣಿಗೆ ನಡೆಸಲಾಯಿತು. ಶನಿವಾರ ಮಧ್ಯಾಹ್ನ 12ರ ಸಮಯದಲ್ಲಿ ಮೆರವಣಿಗೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಶೇಖರಗೌಡ ಹಾಗೂ ಕಾಂಗ್ರೆಸ್ ಮುಖಂಡ ಷಣ್ಮುಖಪ್ಪ ಅವರು ಕೃಷ್ಣನ ಮೂರ್ತಿ ಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿ ಬಳಿಕ ಮಾತನಾಡಿದರು. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಈ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಗೊಲ್ಲ ಸಮುದಾಯದ ಮಹಿಳೆಯರು ಸೇರಿದಂತೆ ಯುವಕರು ಭಾಗಿಯಾಗಿದ್ದರು.ತರುವಾಯ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಗೊಲ್ಲ ಸಮುದಾಯದ ಮುಖಂಡರು ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾದರು.