ಅವರು ಇಂದು JSS ಪ್ರಸಾದ ನಿಲಯಗಳ ಹಿರಿಯ ವಿದ್ಯಾರ್ಥಿಗಳ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಮೈಸೂರು ಇವರ ವತಿಯಿಂದ ಮೈಸೂರಿನ ವರುಣ ಕೆರೆಯ ಪಕ್ಕದಲ್ಲಿರುವ ಶ್ರೀ ಶಿವರಾತ್ರಿ ರಾಜೇಂದ್ರ ನಗರದಲ್ಲಿ ಆಯೋಜಿಸಲಾಗಿದ್ದ ಶ್ರೀ ಶಿವರಾತ್ರಿ ರಾಜೇಂದ್ರ ಅನುಭವ ಮಂಟಪ ಹಾಗೂ ಸಂಘದ ಕಚೇರಿ ಯನ್ನು ಉದ್ಘಾಟನೆ ಮಾಡಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಶಿಕ್ಷಣದಿಂದ ಮಾತ್ರ ನಮ್ಮ ಜ್ಞಾನದ ವಿಕಾಸವಾಗುತ್ತದೆ. ಅದರಿಂದ ನಾವು ಸ್ವತಂತ್ರ, ಸ್ವಾಭಿಮಾನಿ ಹಾಗೂ ಜವಾಬ್ದಾರಿಯುತ ವ್ಯಕ್ತಿಯಾಗಲು ಸಾಧ್ಯ. ಅದಕ್ಕಾಗಿ ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆದುಕೊಳ್ಳಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.