ಕೊಪ್ಪಳ ನಗರದಲ್ಲಿ ಸೋಮವಾರ ಮಧ್ಯಾಹ್ನ 3:30ರ ಸುಮಾರಿಗೆ ಮತ್ತೆ ಮಳೆರಾಯನ ಆರ್ಭಟ ಜೋರಾಗಿದೆ. ಕಳೆದ ಒಂದು ವಾರಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು ನಗರದಲ್ಲಿ ಜನಜೀವನ ಆಸ್ತವ್ಯಸ್ತವಾಗಿದೆ. ಮಳೆಯಿಂದ ರೈತರಲ್ಲಿ ಹರ್ಷ ಮುಡಿದು ನಗರದಲ್ಲಿ ಜನರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ . ನಗರದ ಹಲವೆಡೆ ತಗ್ಗು ಗುಂಡಿಗಳಲ್ಲಿ ನೀರು ನಿಂತಿದ್ದು ಸಂಚಾರಕ್ಕೆ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ