ಚಿಕ್ಕಂದವಾಡಿ ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿಯ ಗ್ರಾಮ ಶಾಖೆಯನ್ನ ಉದ್ಘಾಟನೆ ಮಾಡಲಾಯಿತು. ಕರ್ನಾಟಕ ದಲಿತ ಸಂಘರ್ಷ ಸಮಿತಿ ಪರಿವರ್ತನವಾದ ರಾಜ್ಯ ಪ್ರಧಾನ ಸಂಚಾಲಕರಾದ ಎಂ ಗೋವಿಂದರಾಜ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಹಾಗೂ ಗ್ರಾಮದಲ್ಲಿ ಮೆರವಣಿಗೆ ಮೂಲಕ ನೂತನ ಶಾಖೆಗೆ ಚಾಲನೆ ನೀಡಲಾಯಿತು.