ಹನೂರು ತಾಲ್ಲೂಕಿನ ಎಲ್ಲೆಮಾಳ ಸಮೀಪ ಇರುವ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ಮುಖಮುಖಿ ಡಿಕ್ಕಿಯಾಗಿದೆ. ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಪ್ರಜ್ಞೆ ತಪ್ಪಿದ್ದಾರೆ. ಇನ್ನೂ ಬೈಕ್ ಸವಾರ ಯಳಂದೂರು ತಾಲ್ಲೂಕಿನ ಇರಸವಾಡಿ ಗ್ರಾಮದ ಹೇಮಂತ್ ಎಂದು ತಿಳಿದು ಬಂದಿದ್ದು. ಸಾಧ್ಯ ಹನೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.