ವಿಜಯಪುರ ನಗರದ ನವರಸಪುರ ಶಾಖಾ ವ್ಯಾಪ್ತಿಯಲ್ಲಿ ಎಚ್. ಟಿ. ವಾಹಕ ಬದಲಾವಣೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವುದರಿಂದ ಸೇನಾ ನಗರ, ಟೇಜರಿ ಕಾಲೋನಿ, ರಾಮದೇವ ನಗರ, ಅಯ್ಯಪ್ಪ ಸ್ವಾಮಿ ದೇವಸ್ಥಾನ, ಇಟಗಿ ಕಾಲೋನಿ,ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 15 ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 6ಗಂಟೆ ವರೆಗೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ವಿಜಯಪುರದಲ್ಲಿ ಶನಿವಾರ ಸಾಯಂಕಾಲ 5ಗಂಟೆ ಸುಮಾರಿಗೆ ಪತ್ರಿಕಾ ಪ್ರಕಟಣೆ ಮೂಲಕ ಹೆಸ್ಕಾಂ ಅಭಿಯಂತರರು ಮನವಿ ಮಾಡಿದರು.