ಮುಂದಿನ ಕೆಲವು ದಶಕಗಳ ದೂರದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ರಾಜ್ಯದಲ್ಲಿ ಬರಬಹುದಾದ ವಿದ್ಯುತ್ ಕೊರತೆಯನ್ನು ನೀಗಿಸಿ, ಸಮರ್ಪಕವಾಗಿ ವಿದ್ಯುತ್‌ನ್ನು ಸರಬರಾಜುಗೊಳಿಸಲು 2000ಕೋಟಿ ರೂ.ಗಳ ವೆಚ್ಚದಲ್ಲಿ ಪಂಪ್ಡ್ ಸ್ಟೋರೇಜ್ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ಭದ್ರಾವತಿ ತಾಲೂಕಿನ ಭದ್ರಾ ಜಲಾಶಯಕ್ಕೆ ಭೇಟಿ ನೀಡಿದ ವೇಳೆ ಸೋಮವಾರ ಮಧ್ಯಾಹ್ನ 3 ಗಂಟೆಗೆ ಮಾತನಾಡಿದ ಅವರು, ಹರಿಯುವ ನದಿಗೆ ಯಾವುದೇ ಅಡತಡೆ ಮಾಡದಂತೆ ಈಗಿರುವ ನೀರನ್ನು ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಅಂದಾಜು 2000ಮೆ.ವ್ಯಾ. ವಿದ್ಯುತನ್ನು ಉತ್ಪಾದಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.