ಜಿಲ್ಲಾ ಪೊಲೀಸ್ ವತಿಯಿಂದ ಮುಂಬರುವ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯನ್ನು ಎಸ್.ಪಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು. ಎಸ್.ಪಿ ಶ್ರೀನಿವಾಸ್ ಗೌಡ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.ಈ ವೇಳೆ ಮಾತನಾಡಿದ ಎಸ್.ಪಿ ಶ್ರೀನಿವಾಸ್ ಗೌಡ ಎರಡು ಸಮುದಾಯದವರು ಹಬ್ಬಗಳನ್ನ ಆಚರಣೆ ಮಾಡುತ್ತೀರಿ ಹಾಗಾಗಿ ಎಲ್ಲಿಯು ಕಾನೂನು ಸಂಘರ್ಷಕ್ಕೆ ಅವಕಾಶ ಮಾಡಿಕೊಡದಂತೆ ಆಚರಣೆ ಮಾಡಿ ಎಂದು ಸೂಚನೆ ನೀಡಿದರು.