ವಡಗೇರಾ ಮೊರಾರ್ಜಿ ವಸತಿ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ವಡಗೇರಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಯಾದಗಿರಿಯ ಜಿಲ್ಲಾಧಿಕಾರಿಗಳಾದ ಹರ್ಷಲ್ ಭೋಯರ್ ಅವರು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ವಸತಿ ಶಾಲೆಗೆ ಭೇಟಿ ನೀಡಿ ಶಾಲೆಯಲ್ಲಿರುವ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು ನಂತರ ವಿದ್ಯಾರ್ಥಿಗಳೊಂದಿಗೆ ಹೊಸತಿ ನಿಲಯದಲ್ಲಿ ನೀಡುತ್ತಿರುವ ಶಿಕ್ಷಣ ಮತ್ತು ಅವರ ಸೌಕರ್ಯಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದರು ವಿದ್ಯಾರ್ಥಿಗಳಿಗೆ ನೀಡುವ ಆಹಾರದ ಗುಣಮಟ್ಟವನ್ನು ಜಿಲ್ಲಾಧಿಕಾರಿಗಳು ಸವಿದು ಪರಿಶೀಲಿಸಲಾಯಿತು ಈ ಸಂದರ್ಭದಲ್ಲಿ ವಸತಿ ಶಾಲೆಯ ಶಿಕ್ಷಕರು ಭಾಗವಹಿಸಿದ್ದರು