ಶನಿವಾರ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಆಯುಕ್ತ ಡಾ ರಾಜೇಂದ್ರ, ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ಆದರ್ಶ್ ಲೇಔಟ್ನಲ್ಲಿ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು. ನಗರ ಪಾಲಿಕೆಯ ವಾರ್ಡ್ 35ರ ಪೌರಕಾರ್ಮಿಕರ ಮಸ್ಟರಿಂಗ್ ಸ್ಥಳಕ್ಕೆ ಭೇಟಿ ಕೊಟ್ಟ ಆಯುಕ್ತರು, ಪೌರಕಾರ್ಮಿಕರ ಹಾಜರಾತಿ ಪರಿಶೀಲಿಸಿ, ಅವರೊಡನೆ ಸಮಾಲೋಚಿಸಿ, ಸಿಬ್ಬಂದಿಗಳಿಗೆ ವ್ಯವಸ್ಥಿತ ತ್ಯಾಜ್ಯ ನಿರ್ವಹಣೆಗೆ ಅಗತ್ಯ ಸೂಚನೆಯನ್ನು ನೀಡಿದರು. ಆಯುಕ್ತರು ಅಧಿಕಾರಿಗಳೊಂದಿಗೆ ವಾರ್ಡ್ 36ರ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿ, ಕ್ಯಾಂಟೀನ್ ಸುತ್ತ ಸ್ವಚ್ಛತೆ ಕಾಪಾಡುವಂತೆ ಸಿಬ್ಬಂದಿಗಳಿಗೆ ತಿಳಿಸಿ, ಅಧಿಕಾರಿಗಳೊಂದಿಗೆ ಉಪಹಾರ ಸೇವಿಸಿದರು.