ಚಂಜಿಮಲೆ ಗ್ರಾಮದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ರಿಂದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಚಂಜಿಮಲೆ ಗ್ರಾಮದಿಂದ ಕಡಗಟ್ಟೂರು ವಯ ಸೀತಿ ಹೊಸೂರು ಮತ್ತು ಬೈರಂಡಹಳ್ಳಿ ವರೆಗೆ ಸುಮಾರು 5 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭಾನುವಾರ ಮಧ್ಯಾನ 12 ಗಂಟೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ್ದಾರೆ ರಾಜ್ಯದ ಕಾಂಗ್ರೆಸ್ ಸರ್ಕಾರ ರಸ್ತೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತಿದ್ದು ಒಂದು ವರ್ಷದಲ್ಲಿ ಕೋಲಾರ ಕ್ಷೇತ್ರದಲ್ಲಿ ರಸ್ತೆಗಳು ಸಂಪೂರ್ಣವಾಗಿ ಡಾಂಬರೀಕರಣ ಮಾಡಲಾಗುವುದು ಎಂದು ತಿಳಿಸಿದ್ದಾರೆ