ಚಾಮರಾಜನಗರ ತಾಲೂಕಿನ ಕರಿನಂಜನಪುರ ಗ್ರಾಮದ ಮಣಿ ಎಂಬುವರ ಜಮೀನಿನಲ್ಲಿ ಕಬ್ಬು ಕಟಾವು ಮಾಡುವಾಗ ಸಂದರ್ಭದಲ್ಲಿ ಭಾರಿ ಗಾತ್ರದ ಹೆಬ್ಬಾವು ಪ್ರತ್ಯಕ್ಷವಾಗಿದೆ. ಈ ವೇಳೆ ಕಬ್ಬು ಕಟಾವು ಮಾಡುತ್ತಿದ್ದ ರೈತರು ಹೆಬ್ಬಾವು ನೋಡಿ ಭಯದಿಂದ ಅಲ್ಲಿಂದ ಕಾಲ್ಕಿತ್ತ ಘಟನೆ ನಡೆಯಿತು. ಬಳಿಕ ಉರಗ ಪ್ರೇಮಿ ಸ್ನೇಕ್ ಅಶೋಕ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಆಗಮಿಸಿದ ಸ್ನೇಕ್ ಅಶೋಕ್ ಅವರು ಹರಸಾಹನ ಮಾಡಿ ಕೊನೆಗೂ ಹೆಬ್ಬಾವನ್ನು ರಕ್ಷಣೆ ಮಾಡಿ ನಂತರ ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಬಿಆರ್ ಟಿ ಅರಣ್ಯ ಪ್ರದೇಶಕ್ಕೆ ಬಿಡಲಾಯಿತು.