ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಂದಿರುವ ಹಿನ್ನೆಲೆಯಲ್ಲಿ ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಬಂದಿದ್ದು ಬಸವಸಾಗರ ಜಲಾಶಯದಿಂದ ಸಂಪೂರ್ಣವಾಗಿ ಭರ್ತಿಯಾಗಿದ್ದು ಕೃಷ್ಣಾ ನದಿಗೆ ಸೋಮವಾರ ಬೆಳಗ್ಗೆ 11 ಗಂಟೆಗೆ 1, ಲಕ್ಷ 34,ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು ಕೃಷ್ಣಾ ನದಿ ದಡಕ್ಕೆ ಯಾರು ತೆರಳದಂತೆ ಜಲಾಶಯದ ಅಧಿಕಾರಿಗಳಿಂದ ಎಚ್ಚರಿಕೆ ನೀಡಿದ್ದಾರೆ