ಮಾಜಾಳಿಯ ಗಾಬೀತವಾಡಾದ ಮನೆಯೊಂದರಲ್ಲಿ ಕಳ್ಳತನ ನಡೆಸಿದರುವ ಬಗ್ಗೆ ಚಿತ್ತಾಕುಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಗ್ಗೆ ರವಿವಾರ ಸಂಜೆ 6ಕ್ಕೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ. ಪರೇಶ ಮೇಥಾ ಎನ್ನುವವರ ಮನೆಯಲ್ಲಿ ಕಳ್ಳತನವಾಗಿದೆ. ಮೀನುಗಾರಿಕೆ ಕಸಲು ಮಾಡಿಕೊಂಡಿರುವ ಪರೇಶ ಮನೆಯಲ್ಲಿ ಇಲ್ಲದಿದ್ದಾಗ ಕಳ್ಳತನವಾಗಿದೆ. ಮನೆಯಲ್ಲಿದ್ದ ಕಪಾಟಿನ ಲಾಕರ್ ಒಡೆದು ಚಿನ್ನಾಭರಣ ದೋಚಿದ್ದಾರೆ. ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.