ನಗರದಲ್ಲಿ ರಜಾ ದಿನಗಳಲ್ಲಿಯೂ ರಸ್ತೆ ಗುಂಡಿಗಳ ಮುಚ್ಚುವ ಕಾರ್ಯಕ್ಕೆ ಚುರುಕು ನೀಡಲಾಗಿದೆ. ಬಿಬಿಎಂಪಿಯ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರ ನಿರ್ದೇಶನದ ಮೇರೆಗೆ ಬೆಂಗಳೂರಿನ ಎಲ್ಲಾ ವಲಯಗಳಲ್ಲಿ ಆಗಸ್ಟ್ 24ರಂದು ಬೆಳಿಗ್ಗೆ 9 ಗಂಟೆಯಿಂದಲೇ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಮುಂದುವರೆಯಿತು.ಪಾಲಿಕೆಯ ಎಲ್ಲಾ 8 ವಲಯಗಳಲ್ಲಿಯೂ ರಜಾ ದಿನವಾದ ಶನಿವಾರ ಹಾಗೂ ಭಾನುವಾರವೂ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ನಡೆಸಲಾಗುತ್ತಿದ್ದು, ಈ ವೇಳೆ ಅಭಿಯಂತರರು ಸ್ಥಳದಲ್ಲಿರಲಿದ್ದಾರೆ ಎಂದು ಬಿಬಿಎಂಪಿ ತಿಳಿಸಿದೆ