ತಾಲೂಕಿನ ಹುಳಿಮಾವು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತಾಲೂಕು ಆಡಳಿತ ಮತ್ತು ಗ್ರಾಮ ಪಂಚಾಯತಿ ವತಿಯಿಂದ ಹಮ್ಮಿಕೊಂಡಿದ್ದ ಸಾರ್ವಜನಿಕರ ಕುಂದು ಕೊರತೆ ಜನಸಂಪರ್ಕ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಯತಿಂದ್ರ ಸಿದ್ರಾಮಯ್ಯನವರು ಭಾಗವಹಿಸಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದರು. ಹುಳಿಮಾವು ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳ ರೈತರಿಗೆ ಅನುಕೂಲವಾಗುವಂತೆ ಪೋಡಿ ಅಭಿಯಾನ ಮತ್ತು ಪೋಡಿಮುಕ್ತ ಗ್ರಾಮ ಮಾಡಲು ಕ್ರಮ ಕೈಗೊಳ್ಳುವಂತೆ ತಾಲೂಕು ತಹಸೀಲ್ದಾರ್ ಗೆ ಖಡಕ್ ಸೂಚನೆ ನೀಡಿದರು.