ಯಲ್ಲಾಪುರ : ಗುಳ್ಳಾಪುರ - ಹೆಗ್ಗಾರ ಸೇತುವೆ ನಿರ್ಮಾಣಕ್ಕೆ 35 ಕೋಟಿ ಅನುದಾನ ಮಂಜೂರಾತಿಗೆ ಅನುಮೋದನೆ ದೊರೆತಿದೆ.ತಾಲೂಕಿನ ಗುಳ್ಳಾಪುರ ಹಾಗೂ ಅಂಕೋಲಾ ತಾಲೂಕಿನ ಹೆಗ್ಗಾರ ಗ್ರಾಮಗಳನ್ನು ಸಂಪರ್ಕಿಸುವ ಸೇತುವೆ ನಿರ್ಮಾಣಕ್ಕೆ, ಶಾಸಕರಾದ ಶಿವರಾಮ ಹೆಬ್ಬಾರ್ ಅವರ ನಿರಂತರ ಪ್ರಯತ್ನದ ಫಲವಾಗಿ, ರಾಜ್ಯ ಸರ್ಕಾರವು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ. ಶಾಸಕ ಶಿವರಾಮ ಹೆಬ್ಬಾರ್ ಅವರು ಇಂದು ಗುಳ್ಳಾಪುರ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಗ್ರಾಮಸ್ಥರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ ವ್ಯಕ್ತಪಡಿಸಿದರು.