ಗೂಂಡಾಗಳ ಮೇಲೆ ಹಾಕಿದ್ದ ಪ್ರಕರಣವನ್ನು ಸಚಿವ ಸಂಪುಟದಲ್ಲಿ ಸರ್ಕಾರ ಹಿಂತೆಗೆದುಕೊಂಡಿದ್ದರಿಂದಲೇ ಮದ್ದೂರು ಗಲಭೆಗೆ ಕಾರಣವಾಯಿತು ಎಂದು ಮಾಜಿ ಸಚಿವ ರೇಣುಕಾಚಾರ್ಯ ಆರೋಪ ಮಾಡಿದರು.ಅವರು ತುಮಕೂರಿನ ಕ್ಯಾಸಂದ್ರದ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಲಿಂಗಸ್ವಾಮೀಜಿಯವರ ಆಶೀರ್ವಾದ ಪಡೆದು ಬಳಿಕ ಶುಕ್ರವಾರ ಮಧ್ಯಾಹ್ನ 3.30 ರ ಸಮಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ಎಸೆದುದವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ ಬ್ರದರ್ಸ್ ಆಗಿದ್ದಾರೆ ಸಿಎಂ ಸಿದ್ದರಾಮಯ್ಯ ಅವರಿಗೆ ಶಾಂತಿಧೂತರಾಗಿದ್ದಾರೆ ಎಂದು ವ್ಯಂಗ್ಯವಾಡಿದರು.ಮದ್ದೂರಿನಲ್ಲಿ ಗಲಭೆ ಪೂರ್ವ ನಿಯೋಜಿತವಾಗಿದೆ ಎಂದರು.