ಸುರಪುರ ನಗರದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದ ನಿವೇಶನ ಭೂಮಿ ಮಂಜೂರಾತಿ ಹೋರಾಟ ಸಮಿತಿ ಹಾಗೂ ದಲಿತ ಸಂಘಟನೆಗಳ ಒಕ್ಕೂಟದಿಂದ ನಿವೇಶನ ಭೂಮಿಗಾಗಿ ನಡೆಯುತ್ತಿರುವ ಅಹೋ ರಾತ್ರಿ ಧರಣಿ ಸತ್ಯಾಗ್ರಹದಲ್ಲಿ ಸುರಪುರ ತಾಲೂಕಿನ ಮಾಲಗತ್ತಿ ಗ್ರಾಮದ ಅನೇಕ ದಲಿತ ಸಂಘಟನೆಗಳ ಮುಖಂಡರು ಭಾನುವಾರ ಬೆಳಗ್ಗೆ ಧರಣಿಯಲ್ಲಿ ಪಾಲ್ಗೊಂಡಿರುವ ಧರಣಿ ಸ್ಥಳಕ್ಕೆ ಆಗಮಿಸುವ ಮುನ್ನ ಘೋಷಣೆಗಳನ್ನು ಕೂಗುತ್ತಾ ಸರ್ಕಾರಕ್ಕೆ ಒತ್ತಾಯಿಸಿ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ನಂತರ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಧರಣಿಯನ್ನು ಆರಂಭಿಸಿದ್ದಾರೆ.