ಕುಡಿತದ ಚಟಕ್ಕೆ ಅಂಟಿಕೊಂಡಿದ್ದ ವ್ಯಕ್ತಿ ಕುಳಿತಲ್ಲಿಯೇ ಸಾವನ್ನಪ್ಪಿದ ಘಟನೆ ಹಿರೇಕೆರೂರು ಬಸ್ ನಿಲ್ದಾಣ ಆವರಣದಲ್ಲಿ ನಡೆದಿದೆ. ತಾಲೂಕಿನ ಚಿಕ್ಕೋಣತಿ ಗ್ರಾಮದ ನಾಗರಾಜ ಮಲ್ಲೇಶಪ್ಪ ಸಣ್ಣಕಾರಗಿ (48) ಮೃತ ವ್ಯಕ್ತಿಯಾಗಿದ್ದಾರೆ. ವಿಪರೀತ ಕುಡಿತದ ಚಟಕ್ಕೆ ಅಂಟಿಕೊಂಡಿದ್ದ. ಸಮಯಕ್ಕೆ ಸರಿಯಾಗಿ ಊಟ ಮಾಡದ ಹಿನ್ನಲೆಯಲ್ಲಿ ಕುಳಿತಲ್ಲಿಯೇ ಸಾವನ್ನಪ್ಪಿದ್ದಾನೆ. ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.