ಆಗಸ್ಟ್ 30 ರಂದು ಬೆಳಿಗ್ಗೆ 10:30 ಗಂಟೆಗೆ ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ಆಪರೇಷನ್ ಸಿಂಧೂರ ವಿಜಯೋತ್ಸವ ಕಾರ್ಯಕ್ರಮಕ್ಕೆ ಶಾಲಾ ಕಾಲೇಜಿನ 10 ಸಾವಿರ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಆಪರೇಷನ್ ಸಿಂಧೂರ ವಿಜಯೋತ್ಸವ ಸಮಿತಿ ಸಂಚಾಲಕ ಪ್ರಭಾಕರ್ ಹೇಳಿದರು.ಅವರು ಜೂನಿಯರ್ ಕಾಲೇಜು ಮೈದಾನದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಗುರುವಾರ ಮಧ್ಯಾಹ್ನ 12 ರ ಸಮಯದಲ್ಲಿ ಮಾತನಾಡಿದರು.ಈ ವೇಳೆ ಸಮಿತಿ ಸಂಚಾಲಕಿ ಆಶಾ ಪ್ರಸನ್ನ ಕುಮಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಥಿತಿಗಳ ಮಾಹಿತಿ ನೀಡಿದರು.