ಒಂದು ಮದುವೆ ಆಗಿದ್ದರೂ ಯುವತಿಯೊಬ್ಬಳನ್ನ ಪ್ರೀತಿಸಿ ಮದುವೆ ಆಗುವುದಾಗಿ ನಂಬಿಸಿ ಕೈಕೊಟ್ಟ ಪ್ರಿಯಕರ ಪ್ರೇಯಸಿಯನ್ನ ಎರಡನೇ ಮಹಡಿಯಿಂದ ತಳ್ಳಿ ಕೊಲೆಗೆ ಯತ್ನಿಸಿದ ಘಟನೆ ಮೈಸೂರಿನ ದಟ್ಟಗಳ್ಳಿ ಬಡಾವಣೆಯಲ್ಲಿ ನಡೆದಿದೆ.ಎರಡನೇ ಮಹಡಿಯಿಂದ ಕೆಳಬಿದ್ದ ಯುವತಿ ತೀವ್ರ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಸಂಭಂಧ ಪ್ರಿಯಕರ ಆಲ್ಬರ್ಟ್,ಈತನ ತಮ್ಮ ಗೋಕುಲ್ ಹಾಗೂ ಪತ್ನಿ ಸುಭಿತ ಮೇಲೆ ಯುವತಿ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ನೊಂದ ಯುವತಿ ಹಾಗೂ ಆಲ್ಬರ್ಟ್ ಬೆಂಗಳೂರಿನ ಕಾರ್ ಶೋರೂಂ ನಲ್ಲಿ ಸಹದ್ಯೋಗಿಗಳು.ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.ಒಂದು ವರ್ಷದ ಹಿಂದೆ ಆಲ್ಬರ್ಟ್ ಮೈಸೂರಿನಲ್ಲಿ ನೆಲೆಸಿದ್ದು ಖಾಸಗಿ ಕಾರ್ ಶೋರೂಂ ನಲ್ಲಿ ಕೆಲಸ