ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ 536 ಮಂದಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.ಜಿಲ್ಲೆಯಲ್ಲಿ ಪೊಲೀಸ್ ದಾಖಲೆಗಳ ಪ್ರಕಾರ ಅಧಿಕೃತವಾಗಿ 536 ಜನ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದರಲ್ಲಿ 404 ಜನ ಪುರುಷರು ವಿಷ ಸೇವಿಸಿ, ನೇಣು, ಬಿಗಿದುಕೊಂಡು, ಬೆಂಕಿ ಹಚ್ಚಿಕೊಂಡು, ಕ್ರಿಮಿನಾಶಕ ಸೇವಿಸಿ ಸಾವಿಗೆ ಶರಣಾಗಿದ್ದಾರೆ. 132 ಜನ ಮಹಿಳೆಯರು ಸಹ ಸಾವನ್ನಪ್ಪಿದ್ದಾರೆ ಎಂದು ಎಸ್ಪಿ ಕುಶಾಲ್ ಚೌಕ್ಸೆಯವರು ಮಾಹಿತಿ ನೀಡಿದ್ದಾರೆ.