ಮಾಗಡಿ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆಯನ್ನು ನೀಡಲು ಡಿಸಿಎಂ ಡಿಕೆ ಶಿವಕುಮಾರ್ ಆಗಮಿಸುತ್ತಿದ್ದಾರೆ ಎಂದು ಶಾಸಕ ಬಾಲಕೃಷ್ಣ ತಿಳಿಸಿದರು. ಮಾಗಡಿ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಮಾಗಡಿ ಪಟ್ಟಣದ ಕೆಂಪೇಗೌಡರ ಕೋಟೆ ಅಭಿವೃದ್ಧಿ ಸೇರದಂತೆ ಇತರೆ ಕಾಮಗಾರಿಗಳಿಗೆ ಚಾಲನೆಯನ್ನು ನೀಡಲಿಕ್ಕೆ ಸಚಿವರು ಆಗಮಿಸುತ್ತಿದ್ದಾರೆ. ಇದೇ ತಿಂಗಳ 29 ರಂದು ಕಾರ್ಯಕ್ರಮ ಕೋಟೆ ಮೈದಾನದಲ್ಲಿ ನಡೆಯಲಿದೆ ಅಂತ ಅವರು ತಿಳಿಸಿದರು.