-ಮಡಿಕೇರಿ ಜನೋತ್ಸವ ದಸರಾವನ್ನು ಸಂಭ್ರಮ, ಸಡಗರ, ಸುರಕ್ಷತೆ ಹಾಗೂ ಸ್ವಚ್ಛತೆಯಿಂದ ಆಚರಿಸಲು ಶುಕ್ರವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶಾಸಕರಾದ ಡಾ.ಮಂತರ್ ಗೌಡ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ದಸರಾ ಸಮಿತಿ ಕಾರ್ಯಾಧ್ಯಕ್ಷರಾದ ಅರುಣ್ ಕುಮಾರ್ ಇತರರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು. ಸಭೆಯಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ಸಂಪ್ರದಾಯದಂತೆ ಹಿಂದಿನಿಂದ ನಡೆದುಕೊಂಡು ಬಂದಿರುವ ಮಡಿಕೇರಿ ದಸರಾವನ್ನು ವ್ಯವಸ್ಥಿತವಾಗಿ ಆಚರಿಸುವಂತಾಗಬೇಕು. ಸುರಕ್ಷತೆಗೆ ಒತ್ತು ನೀಡಬೇಕು ಎಂದರು.