ಚಾಮರಾಜನಗರದ ರೋಟರಿ ಭವನದಲ್ಲಿ ನಡೆದ ವಿಶ್ವದ ಅತಿ ದೊಡ್ಡ ರಕ್ತ ದಾನ ಶಿಬಿರದಲ್ಲಿ 25 ಮಂದಿ ರಕ್ತದಾನ ಮಾಡಿದರು. ಇದಕ್ಕೂ ಮೊದಲು ಪ್ರಕಾಶ ಭವನದಲ್ಲಿ ರಾಜಯೋಗಿನಿ ದಾದಿ ಪ್ರಕಾಶ ಮಣಿಜೀ ಅವರ ಭಾವಚಿತ್ರ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಂಚಾಲಕಿ ಬಿ.ಕೆ.ದಾನೇಶ್ವರಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ರಕ್ತದಾನ ಬಹಳ ಅವಶ್ಯಕವಾಗಿದೆ. ಏಕೆಂದರೆ ಬಹಳ ರಸ್ತೆ ಅಪಘಾತಗಳು. ತುರ್ತು ಸಂದರ್ಭದಲ್ಲಿ ರಕ್ತ ಬೇಕಾಗುತ್ತದೆ ಎಂದರು