ಫೇಸ್ ಬುಕ್ ಮೂಲಕ ಬಾಲಕಿಯನ್ನು ಪರಿಚಯಿಸಿಕೊಂಡು ಬಳಿಕ ಅಪಹರಿಸಿ ಅತ್ಯಾಚಾರ ಎಸಗಿದ್ದ ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಚಾಮರಾಜನಗರದ ಅಧಿಕ ಜಿಲ್ಲಾ ಮತ್ತು ಸತ್ರ ಎಫ್ಟಿ ಎಸ್ಸಿ ನ್ಯಾಯಾಲಯ ಆದೇಶಿಸಿದೆ. ಹನೂರು ತಾಲೂಕಿನ ಚಿಕ್ಕಮಾಲಾಪುರ ಗ್ರಾಮದ ನಾಗೇಂದ್ರ(24) ಶಿಕ್ಷೆಗೊಳಗಾದ ಅಪರಾಧಿ. 2023 ರಲ್ಲಿ ಫೇಸ್ ಬುಕ್ ಮೂಲಕ ಬಾಲಕಿಯನ್ನು ಪರಿಚಯಿಸಿಕೊಂಡ ಈತ ಬಳಿಕ ಆಕೆಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದನು. ಸಾಕ್ಷಾಧಾರಗಳಿಂದ ಅಪರಾಧ ಸಾಬೀತಾದ ಹಿನ್ನೆಲೆ 20 ವರ್ಷ ಕಠಿಣ ಶಿಕ್ಷೆ, 25 ಸಾವಿರ ದಂಡ ವಿಧಿಸಿ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಜೆ.ಕೃಷ್ಣ ಆದೇಶಿಸಿದ್ದಾರೆ. ವಿಶೇಷ ಸರ್ಕಾರಿ ಅಭಿಯೋಜಕರಾದ ಕೆ.ಯೊಗೇಶ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು