ಧಾರವಾಡದ ಸಪ್ತಾಪುರದ ಎಸ್ಟಿ ಬಾಲಕರ ಹಾಸ್ಟೆಲ್‌ಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಎಐಡಿಎಸ್‌ಓ ಸಂಘಟನೆ ನೇತೃತ್ವದಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಮಧ್ಯಾಹ್ನ 2 ಗಂಟೆಗೆ ಪ್ರತಿಭಟನೆ ನಡೆಸಿದರು. ಕಾಲೇಜಿನಲ್ಲಿ ಪ್ರವೇಶ ಪಡೆದರೂ ಹಾಸ್ಟೆಲ್ ಸಿಗದೇ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಹಾಸ್ಟೆಲ್ ದೊರೆತರೂ ಅಲ್ಲಿ ಸರಿಯಾದ ಮೂಲಭೂತ ಸೌಕರ್ಯಗಳು ಖಾತ್ರಿಯಾಗದೇ ವಿದ್ಯಾರ್ಥಿಗಳು ಪರದ