ರೈತರು ಕೃಷಿಯನ್ನು ಕೇವಲ ಭಾವನಾತ್ಮಕವಾಗಿ ನೋಡಿದರೆ ಸಾಲದು, ಅದನ್ನು ಉದ್ಯಮವಾಗಿ ಪರಿಗಣಿಸಿದಾಗ ಮಾತ್ರ ಕೃಷಿಯಲ್ಲೂ ಲಾಭ ಪಡೆಯಲು ಸಾಧ್ಯ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಕರೆ ನೀಡಿದರು. ರೈತ ಉತ್ಪಾದಕ ಕಂಪನಿಗಳ ಒಕ್ಕೂಟಗಳ ಪಾತ್ರ ಕುರಿತು ಜಿಲ್ಲಾ ಪಂಚಾಯತ್ ಸಭಾಂಗದಲ್ಲಿ ಶನಿವಾರ ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯಿತಿ, ಸಹೋದಯ ರೈತ ಉತ್ಪಾದಕ ಕಂಪನಿಗಳ ಒಕ್ಕೂಟ ಲಿಮಿಟೆಡ್, ಕೃಷಿ ಇಲಾಖೆ ಹಾಗೂ ಚೈತನ್ಯ ರೂರಾಲ್ ಡೆವಲಪ್ ಮೆಂಟ್ ಸೊಸೈಟಿ ಸೇರಿದಂತೆ ವಿವಿಧ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು