ಕನಕಪುರ --ನೀವೆಲ್ಲರೂ ಮಕ್ಕಳಿಗೆ ಶಿಕ್ಷಣ ನೀಡುತ್ತೀರಿ. ನೀವು ನೀಡುವ ಶಿಕ್ಷಣ ಕೇವಲ ತಲೆಗೆ ಹೋಗುವುದು ಮಾತ್ರವಲ್ಲ, ಮಕ್ಕಳ ಹೃದಯಕ್ಕೆ ನಾಟಬೇಕು. ಆಗ ನಿಮ್ಮ ಜವಾಬ್ದಾರಿ ಹೆಚ್ಚುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬುಧವಾರ ಮಧ್ಯಾಹ್ನ 2:30 ರಲ್ಲಿ ಶಿಕ್ಷಕ ದಿನಾಚರಣೆ ಕಾರ್ಯಕ್ರಮದ ವೇದಿಕೆಯಲ್ಲಿ ಅಭಿಪ್ರಾಯ ಪಟ್ಟರು. ಶಿಕ್ಷಣದಲ್ಲಿ ನಾವು ಪ್ರತಿ ಹಂತದಲ್ಲೂ ಅಪ್ ಡೇಟ್ ಆಗುತ್ತಿರಬೇಕಾಗುತ್ತದೆ. ಮೊದಲು ಅಬಾಕಸ್, ನಂತರ ಕ್ಯಾಲ್ಕುಲೇಟರ್, ಆಮೇಲೆ ಕಂಪ್ಯೂಟರ್, ಗೂಗಲ್ ಈಗ ಚಾಟ್ ಜಿಪಿಟಿ ಬಂದಿದೆ. ಹೀಗೆ ಪ್ರತಿ ಹಂತದಲ್ಲೂ ಹೊಸ ತಂತ್ರಜ್ಞ