ಪಟ್ಟಣದ ಗುಡ್ ಲಕ್ ಹೋಟೆಲ್ ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳ ಸಭೆ ಜರುಗಿತು ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಹೋರಾಟ ಪ್ರತಿ ಹಳ್ಳಿಗಳಲ್ಲಿ ಸಂಘಟನೆ ಬಲಪಡಿಸಬೇಕು. ಹುಣಸಗಿ ತಾಲೂಕಿನ ಎಲ್ಲಾ ಹಳ್ಳಿಗಳಲ್ಲಿ ಬಹಳ ಸಮಸ್ಯೆಗಳನ್ನು ಒಳಗೊಂಡಿರುತ್ತದೆ ಆಯಾ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಚರಂಡಿ ಸಮಸ್ಯೆ ಇದೇ ರೀತಿ ನಾನು ಸಮಸ್ಯೆಗಳನ್ನು ಪ್ರತಿ ಗ್ರಾಮ ಒಳಗೊಂಡಿರುತ್ತದೆ ಆದ ಕಾರಣ ಹುಣಸಗಿ ತಾಲೂಕಿನ ಪ್ರತಿ ಗ್ರಾಮದ ಗ್ರಾಮ ಘಟಕ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ತಾಲೂಕ ಅಧ್ಯಕ್ಷರ ನೇತೃತ್ವದಲ್ಲಿ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ಮಾಡಿ ಎಚ್ಚರಿಕೆ ನೀಡಬೇಕೆಂದು ಕರವೇ ಜಿಲ್ಲಾಧ್ಯಕ್ಷ ಟಿ.ಎನ್ ಭೀಮು ನಾಯಕ ಅವರು ತಿಳಿಸಿದರು