ನಗರದ ಹೆದ್ದಾರಿಯಲ್ಲಿರುವ ಸುರಂಗ ಮಾರ್ಗದಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಗ್ಗಿನ ಜಾವ 4.30 ಸುಮಾರು ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಗೋವಾ ಕಡೆಯಿಂದ ಅಂಕೋಲಾ ಕಡೆಗೆ ತೆರಳುತ್ತಿದ್ದ ಅಲ್ಟೋ ಕಾರಿನ ಚಾಲಕ ಎದುರಿನಿಂದ ಬಂದ ಇನ್ನೊಂದು ವಾಹನವನ್ನು ಓವರ್ ಟೆಕ್ ಮಾಡಲು ಪ್ರಯತ್ನಿಸಿದ್ದ ಎನ್ನಲಾಗಿದ್ದು, ಈ ವೇಳೆ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಕಾರು ಚಲಾಯಿಸುತ್ತಿದ್ದ ಪುತ್ತೂರು ಮೂಲದ ರಂಜಿತ್ ವಿಶ್ವನಾಥ ನಾಯ್ಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನಗರದ ಕಾರವಾರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಮಧ್ಯಾಹ್ನ 12 ರ ಸುಮಾರು ಪ್ರಕರಣ ದಾಖಲಾಗಿದೆ.