ಶಿರಢಾಣ ಗ್ರಾಮದಲ್ಲಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯ ಪ್ರಚಾರ ಸಭೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಭಾಗಿ. ಹುಕ್ಕೇರಿ ತಾಲೂಕಿನ ಶಿರಢಾಣ ಗ್ರಾಮದಲ್ಲಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯ ಪ್ರಚಾರ ಸಭೆಯಲ್ಲಿ ಮಂಗಳವಾರ ಸಚಿವ ಸತೀಶ್ ಜಾರಕಿಹೊಳಿ ಭಾಗವಹಿಸಿದ್ದರು ಈ ಸಂದರ್ಭದಲ್ಲಿ ಮಾತನಾಡಿದ ಅವರು. ಹುಕ್ಕೇರಿಯ ವಿದ್ಯುತ್ ಸಹಕಾರಿ ರಂಗದಲ್ಲಿ ಈ ಬಾರಿ ಬದಲಾವಣೆಯ ಸುವರ್ಣಾವಕಾಶ ದೊರೆತಿರುವ ಹಿನ್ನೆಲೆಯಲ್ಲಿ, ಎಲ್ಲರೂ ಒಂದಾಗಿ ಮುಂದೆ ಬಂದು ಸಹಕಾರಿಯನ್ನು ಉಳಿಸುವ ನಿಟ್ಟಿನಲ್ಲಿ ಬೆಂಬಲ ನೀಡಬೇಕೆಂದು ಹೇಳಿದರು