ಚಿತ್ರರಂಗದ ಹಿರಿಯ ನಟಿಯರು ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ನಟಿ ಜಯಮಾಲ ಅವರು, ಇಂದು ನಾವೆಲ್ಲಾ ಸಿಎಂ ಅವರನ್ನ ಭೇಟಿ ಮಾಡಿದ್ದೇವೆ. ವಿಷ್ಣು ವರ್ದನ್ ಅವರಿಗೆ ಕರ್ನಾಟಕ ರತ್ನ ನೀಡಬೇಕೆಂದು ಮನವಿ ಮಾಡಿದ್ದೇವೆ, ಅಷ್ಟೇ ಅಲ್ಲ ಸರೋಜಾದೇವಿ ಅವರಿಗೂ ಕರ್ನಾಟಕ ರತ್ನ ಕೊಡಬೇಕೆಂದು ವಿನಂತಿ ಮಾಡಿದ್ದೇವೆ. ಸರೋಜಾದೇವಿ ಅವರ ಹೆಸರನ್ನ ರಸ್ತೆಗೂ ಇಡಬೇಕೆಂದು ವಿನಂತಿಸಿದ್ದೇವೆ. ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂಧಿಸಿರುವ ಸಿದ್ದರಾಮಯ್ಯ ಅವರು ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡಲಾಗುವುದು ಎಂದಿದ್ದಾರೆ.