ಚಾಮರಾಜನಗರ ತಾಲೂಕಿನ ಕುದೇರು ಗ್ರಾಮದಲ್ಲಿ ಸ್ವರ್ಣಗೌರಿಯನ್ನು ವಿಜೃಂಭಣೆಯಿಂದ ವಿಸರ್ಜನೆ ಮಾಡಲಾಯಿತು. ಸ್ವರ್ಣಗೌರಿ ದೇವಸ್ಥಾನಕ್ಕೆ ವಿವಿಧ ಹೂಗಳಿಂದ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಿ ಬಳಿಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಸಲಾಯಿತು. ಈ ವೇಳೆ ಊರಿನ ಗ್ರಾಮಸ್ಥರು ಹಾಗೂ ಯುವಕರು ಕುಣಿದು ಕುಪ್ಪಳಿಸಿದರು. ನಂತರ ಕುದೇರಿನ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು.