ಚಾಮರಾಜನಗರ ತಾಲೂಕಿನ ಚಂದಕವಾಡಿ ಗ್ರಾಮದಲ್ಲಿ ಎಂಎಸ್ಐಎಲ್ ವತಿಯಿಂದ ವಿದ್ಯಾರ್ಥಿಗಳಿಗೆ 20 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿ ಶಾಲೆಗಳಿಗೆ ಬೇಕಾದ ಅಗತ್ಯ ಮೂಲಸೌಲಭ್ಯ ಒದಗಿಸಲು ಎಂಎಸ್ಐಎಲ್ ಬದ್ದಾವಾಗಿದ್ದು ಮುಖ್ಯ ಶಿಕ್ಷಕರ ಕೋರಿಕೆ ಮೇರೆಗೆ ಸಿಎಸ್ ಆರ್ ನಿಧಿಯಿಂದ ಐದು ರೂ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿಕೊಡಲಾಗುವುದು ಎಂದರು