ಹಾಸನ :ಗಣಪತಿ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡಿದ 30 ನಿಮಿಷಗಳ ನಂತರ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿ ನಡೆದಿದೆ.ಮಂಜುನಾಥ್ ಮೃತ ದುರ್ದೈವಿ, ಮಂಜುನಾಥ್ ಭಾನುವಾರ ಸಂಜೆ ಗಣಪತಿ ವಿಸರ್ಜನೆಯ ವೇಳೆ ಸುಮಾರು 30 ನಿಮಿಷಗಳ ಕಾಲ ಕುಣಿದ ನಂತರ ಅವರಿಗೆ ಎದೆ ನೋವು ಕಾಣಿಸಿಕೊಂಡು ಹೃದಯಾಘಾತದಿಂದ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮಂಜುನಾಥ್ ಗ್ರಾಮದ ವಾಟರ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತಿದ್ದರು, ಮಂಜುನಾಥ್ ನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.